ನವದೆಹಲಿ: ಕೇರಳ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೊರತುಪಡಿಸಿ ದೇಶಾದ್ಯಂತ ಇಂದಿನಿಂದ ಪವಿತ್ರ ರಂಝಾನ್ ಉಪವಾಸ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ರಂಝಾನ್ ಉಪವಾಸ ಆಚರಣೆ ಪ್ರಯುಕ್ತ ಮುಸ್ಲಿಮ್ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, ‘ರಂಝಾನ್ ಮಾಸದ ಶುಭಾಶಯಗಳು. ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಮತ್ತು ಸಾಮರಸ್ಯವನ್ನು ತರಲಿ. ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ’ ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.