ಯುಎಇ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
Prasthutha: May 14, 2022

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಯುಎಇಯ ನೂತನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ ಶುಭ ಕೋರಿದ್ದಾರೆ.
ಟ್ವೀಟ್ ಮೂಲಕ ಶುಭಹಾರೈಸಿರುವ ಪ್ರಧಾನಿ ಮೋದಿ, ಯುಎಇಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಬುಧಾಬಿಯ ಆಡಳಿತಗಾರ ಎಚ್.ಎಚ್. ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ನನ್ನ ಶುಭ ಹಾರೈಕೆಗಳು. ಅವರ ಕ್ರಿಯಾತ್ಮಕ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ, ನಮ್ಮ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯು ಆಳವಾಗುವುದನ್ನು ಮುಂದುವರಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಬರೆದಿದ್ದಾರೆ.
2004 ರಿಂದ ಯುಎಇಯನ್ನು ಆಳಿದ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಳಿಕ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆಯ್ಕೆಯಾಗಿದ್ದಾರೆ.
