ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರದಾನಿ ಮೋದಿ ಚಾಲನೆ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ನ.2ರಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು.

- Advertisement -

ಸಮಾವೇಶದಲ್ಲಿ ಕರ್ನಾಟಕದ ರಾಜ್ಯಪಾಲರು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವರಾದ ಪಿಯೂಶ್ ಗೋಯೆಲ್, ಪ್ರಲ್ಹಾದ್ ಜೋಶಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಖ್ಯಾತ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

ಈ ಬಾರಿ ಒಟ್ಟಾರೆ 5 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆ ಇದೆ. ಜೊತೆಗೆ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಸೋಲಾರ್, ಗ್ರೀನ್ ಹೈಡ್ರೋಜನ್ ಸೇರಿ ಹಸಿರು ಇಂಧನ ಕ್ಷೇತ್ರದಲ್ಲೇ ಸುಮಾರು 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ನಿರೀಕ್ಷೆ ಮಾಡಲಾಗಿದೆ. ಈ ಪೈಕಿ ರಾಜ್ಯದ ಜಿಂದಾಲ್ ಸಂಸ್ಥೆಯೇ 40 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದೆ.

- Advertisement -

ಉನ್ನತಾಧಿಕಾರ ಸಮಿತಿ ಈಗಾಗಲೇ ಅನುಮೋದಿಸಿರುವ 1.73 ಲಕ್ಷ ಕೋಟಿ ರೂಪಾಯಿ ಹೂಡಿಕೆ ಪ್ರಸ್ತಾವನೆಗಳು ಬಂದಿವೆ. ದಾವೋಸ್ ನಲ್ಲಿ ಸಿಎಂ ಸಮ್ಮುಖದಲ್ಲಿ ಸಹಿ ಹಾಕಿರುವ 58 ಸಾವಿರ ಕೋಟಿ ರೂಪಾಯಿ ಒಪ್ಪಂದಗಳೂ ಸಮಾವೇಶದ ಭಾಗವಾಗಲಿವೆ. ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ.

ನವೆಂಬರ್ 4ರಂದು ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ನಡೆಯಲಿದ್ದು, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.



Join Whatsapp