Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಅವರೇ, ಗೆಳೆಯರಿಗೆ ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಅವರೇ, ಗೆಳೆಯರಿಗೆ ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರೇ, ‘ಸ್ನೇಹಿತರಿಗೆ’ ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ, ಹಣದುಬ್ಬರದಿಂದ ಬಳಲುತ್ತಿರುವ ಜನರಿಗಾಗಿ ಕೆಲಸ ಮಾಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಟುಕಿದ್ದಾರೆ.


ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಅನ್ನು ₹ 500ಕ್ಕೆ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, ರಾಜಸ್ಥಾನದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವುದಕ್ಕಿಂತಲೂ ₹ 500 ಕಡಿಮೆ ಬೆಲೆಗೆ ಸಿಲಿಂಡರ್ ನೀಡುವ ದೊಡ್ಡ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ‘ಸ್ನೇಹಿತರಿಗೆ’ ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ, ಹಣದುಬ್ಬರದಿಂದ ಬಳಲುತ್ತಿರುವ ಜನರಿಗಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ.

Join Whatsapp
Exit mobile version