ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಡುಗೆಯನ್ನು ಶ್ಲಾಘಿಸಿದ ಮೋದಿ

Prasthutha|

ನವದೆಹಲಿ: ರಾಜ್ಯಸಭೆಯಲ್ಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಸದಸ್ಯರನ್ನು ಬೀಳ್ಕೊಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದನ ಮತ್ತು ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದರು.

- Advertisement -


ಮನಮೋಹನ್ ಸಿಂಗ್ ಅವರ ಮಾರ್ಗದರ್ಶನವನ್ನು ನಾವು ಸ್ವೀಕರಿಸಿದ್ದೇವೆ ಎಂದು ಹೇಳಿದ ಪ್ರಧಾನಿ ಮೋದಿ. ಮನಮೋಹನ್ ಸಿಂಗ್ ಜಾಗರೂಕ ಸಂಸದರು. ಸಂಸದರು ಅಮೂಲ್ಯವಾದ ಪರಂಪರೆಯನ್ನು ಬಿಟ್ಟು ಹೋಗುತ್ತಾರೆ ಎಂದು ಹೇಳಿದರು.

‘‘ಇಂದು ನಾನು ಡಾ. ಮನಮೋಹನ್ ಸಿಂಗ್ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ, ಅವರ ಕೊಡುಗೆ ದೊಡ್ಡದಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ’’ ಎಂದರು.
ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ.



Join Whatsapp