ನವದೆಹಲಿ: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದ ಫೋಟೋ ವೈರಲ್ ಆಗಿದೆ.
ಈ ಬಗ್ಗೆ ಮೋದಿ ಟ್ವೀಟ್ ಮಾಡಿದ್ದು, “ ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.
ನವ ದೆಹಲಿಯಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ, ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ. ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ.
ಹಾಸನಕ್ಕೆ ಐ ಐ ಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು ಹಾಗಾಗಿ ಇವತ್ತು ಖುದ್ದು ಪ್ರಧಾನಿಗಳನ್ನು ಭೇಟಿಯಾಗಿ ವಿವರಿಸಿ ಮತ್ತೊಮ್ಮೆ ಮನವಿ ಮಾಡಿದೆ ಎಂದರು.
ಸಚಿವೆ ಸ್ಮೃತಿ ಇರಾನಿ ಅವರ ಕಾಲದಿಂದಲೂ ಪತ್ರ ವ್ಯವಹಾರ ನಡೆಯುತ್ತಿದೆ. ಈ ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದೆ ಆದರೆ ಐಐಟಿ ಸ್ಥಾಪನೆ ಸಾಧ್ಯವಿಲ್ಲ ಎಂದು ಮರು ಪತ್ರ ಬರೆದಿದ್ದರು ಈ ಹಿನ್ನಲೆ ನೇರವಾಗಿ ಪ್ರಧಾನಿಗಳನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ.
ಐ ಐ ಟಿ ಯೋಜನೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿದ್ದಾಗ ಮಾಡಿದ ಯೋಜನೆ ಇದು ಮತ್ತೆ
ಪ್ರಧಾನಿ ಮೋದಿಯವರ ಬಳಿ ಚರ್ಚೆ ಮಾಡಿದ್ದೇನೆ. ಮೋದಿ ಅವರು ಪ್ರಹ್ಲಾದ್ ಜೋಷಿಯವರ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.
ತುಮಕೂರು ಮತ್ತು ಮಂಡ್ಯದಲ್ಲಿ ಪರಿಷತ್ ಚುನಾವಣೆಗೆ ಹೋಗಿ ನಾನು ಪ್ರಚಾರ ಮಾಡುತ್ತೆನೆ ಕುಮಾರಸ್ವಾಮಿ ಆರು ಕ್ಷೇತ್ರದಲ್ಲಿ ಹೋಗಿ ಪ್ರಚಾರ ಮಾಡುತ್ತಾರೆ. ಎಲ್ಲಾ ಕಡೆ ಅಭ್ಯರ್ಥಿ ಹಾಕಲು ನಮ್ಮ ಹತ್ತಿರ ಹಣವಿಲ್ಲ. ಹಾಗಾಗಿ ಎಲ್ಲಾ ಕಡೆ ಅಭ್ಯರ್ಥಿಗಳನ್ನ ಹಾಕಿಲ್ಲ
ಪರಿಷತ್ ಚುನಾವಣೆ ವಿಚಾರ ರಾಜ್ಯದಲ್ಲಿ ಕುಮಾರಸ್ವಾಮಿ ಯಡಿಯೂರಪ್ಪ ತೀರ್ಮಾನ ಮಾಡುತ್ತಾರೆ ಗೊಂದಲವಾಗದಂತೆ ನಿರ್ಧಾರ ಮಾಡಿ ಎಂದು ಹೇಳಿದ್ದೇನೆ.
ಬಿಜೆಪಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೊಣ ಮುಂದಿನ ಚುನಾವಣೆಗೆ ಇದೆ ಮೈತ್ರಿ ಮುಂದುವರೆಯುವ ಚರ್ಚೆ ನಡೆದಿಲ್ಲ ಎಂದು ಹೇಳಿದರು.