ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರನ್ನು ಪ್ಯಾರಿಸ್ ಮಾಡುತ್ತಾರೆ ಎಂದು ಹೇಳೆಯೇ ಇಲ್ಲ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಪ್ರಧಾನಿ ಮೋದಿಯ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ. ಮೋದಿ ಹೇಳಿಕೆಯನ್ನು ಕೆಲ ರಾಜಕಾರಣಿಗಳು ತಿರುಚಿದ್ದಾರೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್, ಕಳೆದ ಬಾರಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ಕೊಟ್ಟಿದ್ದರು. ಆ ಸಂದರ್ಭ ಮೈಸೂರನ್ನು ಪ್ಯಾರಿಸ್ ಮಾಡುತ್ತೇವೆ ಎಂದು ಹೇಳಿರಲಿಲ್ಲ, ವಿಶ್ವದ ಅತಿ ಹೆಚ್ಚು ಪ್ರವಾಸಿಗರನ್ನು ಪ್ಯಾರೀಸ್ ಸೆಳೆಯುತ್ತಿತ್ತು. ಅದೇ ರೀತಿ ಮೈಸೂರಿಗೆ ಪ್ರವಾಸಿಗಳನ್ನು ಸೆಳೆಯುವ ಶಕ್ತಿ ಇದೆ ಎಂದು ಹೇಳಿದ್ದರು. ಇದನ್ನೇ ತಪ್ಪಾಗಿ ಅರ್ಥೈಸಲಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.