ಪ್ರಧಾನಿ ಮೋದಿಯಿಂದ ಅಜ್ಮೀರ್ ದರ್ಗಾಕ್ಕೆ ಚಾದರ ಅರ್ಪಣೆ

Prasthutha|

ಜೈಪುರ: ಪ್ರಖ್ಯಾತ ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಶ್ತಿ ಅವರ ಉರೂಸ್ ಅಂಗವಾಗಿ ಪ್ರಧಾನಿ ಮೋದಿ ಅವರು ಬುಧವಾರ ಅಜ್ಮೀರ್ ದರ್ಗಾಕ್ಕೆ ಚಾದರ ಅರ್ಪಣೆ ಮಾಡಿದ್ದಾರೆ.

- Advertisement -

ಖ್ವಾಜಾ ಅವರ 811ನೇ ಉರೂಸ್ ಅಂಗವಾಗಿ ಪ್ರಪಂಚದಾದ್ಯಂತ ಇರುವ ಅವರ ಅನುಯಾಯಿಗಳಿಗೆ ಶುಭಕೋರಿದ ಪ್ರಧಾನಿ ಮೋದಿ, ದೇಶದ ಸಾಮರಸ್ಯ ಪರಂಪರೆಯ ಬಗ್ಗೆ ಉಲ್ಲೇಖ ಮಾಡಿದ್ದಾರೆ.
‘ದರವೇಶಿಗಳು, ಪೀರ್ ಗಳು ಮತ್ತು ಫಕೀರರು ತಮ್ಮ ಶಾಂತಿ, ಸಹಬಾಳ್ವೆ, ಏಕತೆಯ ಸಂದೇಶದ ಮೂಲಕ ದೇಶದ ಸಾಂಸ್ಕೃತಿಕ ಬಂಧವನ್ನು ಗಟ್ಟಿಗೊಳಿಸಿದ್ದಾರೆ ಎಂದು ಪ್ರಧಾನಿ ಅವರು ಕಳಿಸಿದ ಸಂದೇಶದಲ್ಲಿ ಹೇಳಿದ್ದಾರೆ.

Join Whatsapp