ದುಬೈ: ದುಬೈನಲ್ಲಿ COP28 ಶೃಂಗಸಭೆಯ ಆರಂಭಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 2028 ರಲ್ಲಿ ಭಾರತದಲ್ಲಿ COP33 (ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ) ಅನ್ನು ಆಯೋಜಿಸುವ ಪ್ರಸ್ತಾಪ ಇರಿಸಿದ್ದಾರೆ.
ದುಬೈನಲ್ಲಿ ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ ಎಂದು ಹೇಳಿದ್ದಾರೆ.
ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ.