Home ಟಾಪ್ ಸುದ್ದಿಗಳು ಭಾರತದಲ್ಲಿ COP33 ಶೃಂಗಸಭೆ ಆಯೋಜಿಸಲು ಪ್ರಸ್ತಾಪ ಮುಂದಿಟ್ಟ ಪ್ರಧಾನಿ ಮೋದಿ

ಭಾರತದಲ್ಲಿ COP33 ಶೃಂಗಸಭೆ ಆಯೋಜಿಸಲು ಪ್ರಸ್ತಾಪ ಮುಂದಿಟ್ಟ ಪ್ರಧಾನಿ ಮೋದಿ

ದುಬೈ: ದುಬೈನಲ್ಲಿ COP28 ಶೃಂಗಸಭೆಯ ಆರಂಭಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 2028 ರಲ್ಲಿ ಭಾರತದಲ್ಲಿ COP33 (ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ) ಅನ್ನು ಆಯೋಜಿಸುವ ಪ್ರಸ್ತಾಪ ಇರಿಸಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ ಎಂದು ಹೇಳಿದ್ದಾರೆ.

ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ.

Join Whatsapp
Exit mobile version