ಮೋದಿ ದೇಶದ ಯುವಕರಲ್ಲಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

Prasthutha|

ನವೆದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಕರಲ್ಲಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

- Advertisement -

ಕೇಂದ್ರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.


ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp