Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು: ಪ್ರಿಯಾಂಕ್ ಖರ್ಗೆ

ಪ್ರಧಾನಿ ಮೋದಿ ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಪ್ರಧಾನಿಯವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು. ನಮ್ಮ ಮುಖ್ಯಮಂತ್ರಿ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ ಎಂಬ ಬಗ್ಗೆ ಅವರಿಗೆ ಅನುಮಾನವಿರುವ ಬಗ್ಗೆ ನಾನು ಕೇಳಿದ್ದೇನೆ. ಕರ್ನಾಟಕ ರಾಜಕೀಯಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಸಾಮಾನ್ಯ ಜ್ಞಾನವನ್ನು ನಿಜವಾಗಿಯೂ ಹೆಚ್ಚಿಸಿಕೊಳ್ಳಬೇಕು ಎಂದು ನಾನು ಭಾವಿಸುತ್ತೇನೆ. ಬಿಜೆಪಿ ಅಧಿಕಾರಾವಧಿಯಲ್ಲಿ ಅವರು ಎಂಟು ವರ್ಷಗಳ ಎರಡು ಅವಧಿಯಲ್ಲಿ ಐದು ಮುಖ್ಯಮಂತ್ರಿಗಳನ್ನು ನಮಗೆ ನೀಡಿದ್ದಾರೆ’ ಎಂದು ಹೇಳಿದರು.

Join Whatsapp
Exit mobile version