ಪ್ರಧಾನಿ ಮೋದಿ ಬಾಯಿ ಮಾತಿಗೆ ಮಾತ್ರ ದಲಿತ ಪ್ರೇಮ: ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

Prasthutha|

ಕಲಬುರಗಿ: ಪ್ರಧಾನಿ ಮೋದಿ ಕೇವಲ ಬಾಯಿ ಮಾತಿಗೆ ಮಾತ್ರ ದಲಿತರ ಬಗ್ಗೆ ಮಾತನಾಡುತ್ತಾರೆಯೇ ಹೊರತು ವಾಸ್ತವದಲ್ಲಿ ಈ ವರ್ಗದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ವಕ್ತಾರ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.

- Advertisement -

ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ನರೇಂದ್ರ ಮೋದಿ ಬಾಯಿ ಮಾತಿಗೆ ದಲಿತರ ಬಗ್ಗೆ ಮಾತನಾಡುತ್ತಾರೆ. ವಾಸ್ತವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲೂ ದಲಿತರನ್ನು ಮುಖ್ಯಮಂತ್ರಿ ಹುದ್ದೆಗೇರಿಸಿಲ್ಲ ಎಂದು ಆರೋಪಿಸಿದರು.

ಮಾತ್ರವಲ್ಲ ಪಂಜಾಬ್ ನಲ್ಲಿ ಕಾಂಗ್ರೆಸ್ ದಲಿತ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿಸಿದೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

- Advertisement -

ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಿಗಿಸಿಕೊಂಡಿದ್ದು, ಜನ ಬದಲಾವಣೆ ಬಯಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆಯೇರಿಕೆ ಮೂಲಕ ಜನತೆಯನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.



Join Whatsapp