ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

Prasthutha|

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.

- Advertisement -

ಎಲ್ಲರಿಗೂ ಕ್ರಿಸ್ ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಹಬ್ಬವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ಮೋಡಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

- Advertisement -

ಸಿಎಂ ಸಿದ್ದರಾಮಯ್ಯ ಅವರು ಕೂಡ ಕ್ರಿಸ್ಮಸ್ ಶುಭಾಶಯ ತಿಳಿಸಿದ್ದಾರೆ. ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ನಾಡನ್ನು ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ ಎಂದು ಎಕ್ಸ್ ಶುಭಾಶಯಗಳನ್ನು ತಿಳಿಸಿದ್ದಾರೆ.

Join Whatsapp