Home ಟಾಪ್ ಸುದ್ದಿಗಳು ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.

ಎಲ್ಲರಿಗೂ ಕ್ರಿಸ್ ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಹಬ್ಬವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ಮೋಡಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕೂಡ ಕ್ರಿಸ್ಮಸ್ ಶುಭಾಶಯ ತಿಳಿಸಿದ್ದಾರೆ. ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ನಾಡನ್ನು ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ ಎಂದು ಎಕ್ಸ್ ಶುಭಾಶಯಗಳನ್ನು ತಿಳಿಸಿದ್ದಾರೆ.

Join Whatsapp
Exit mobile version