‘ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ’: ಮಧು ಬಂಗಾರಪ್ಪ

Prasthutha|

ಶಿವಮೊಗ್ಗ: ‘ಪತ್ನಿಯ ಬಗ್ಗೆ ಗೌರವ ಭಾವನೆ ಹೊಂದಿರದ ಪ್ರಧಾನಿ ನರೇಂದ್ರ ಮೋದಿ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಟೀಕಿಸಿದರು.

- Advertisement -


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಗೋಸ್ಕರ ಶ್ರೀರಾಮನನ್ನು ಬೀದಿಗೆ ತಂದಿದ್ದ ಬಿಜೆಪಿಯವರು ಈಗ ಹಿಂದೂಗಳ ಪವಿತ್ರ ಭಾವದ ತಾಳಿಯನ್ನು ಕೀಳುಮಟ್ಟದ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಕೋಮುಗಳ ನಡುವೆ ದ್ವೇಷ ಭಾವನೆ ಮೂಡಿಸಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ.


ಮಾತಿಗೊಮ್ಮೆ ಭಾರತಾಂಬೆ ಎಂದು ಹೇಳುವ ಬಿಜೆಪಿ ನಾಯಕರು ನರೇಂದ್ರ ಮೋದಿ ಅವರ ಮಾಂಗಲ್ಯ ಹೇಳಿಕೆಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಮೋದಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Join Whatsapp