ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

Prasthutha|

ನವದೆಹಲಿ: ಗಾಝಾದ ಅಲ್-ಅಹ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ನಾಗರಿಕರ ಅಪಾರ ಸಾವು ನೋವು ಕುರಿತು ಪ್ರಧಾನಿ ನರೇಂದ್ರ ಮೋದಿ ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. .ಮಹಮೂದ್ ಅಬ್ಬಾಸ್ ಅವರೊಂದಿಗಿನ ನನ್ನ ಸಂಭಾಷಣೆಯಲ್ಲಿ, ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಪ್ರಾಣಹಾನಿಗೆ ನನ್ನ ಸಂತಾಪವನ್ನು ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -

ಭಯೋತ್ಪಾದನೆ, ಹಿಂಸಾಚಾರ ಮತ್ತು ಈ ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ನಮ್ಮ ಆಳವಾದ ಕಳವಳವನ್ನ ನಾವು ಹಂಚಿಕೊಂಡಿದ್ದೇವೆ. ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದಲ್ಲಿ ಭಾರತದ ದೀರ್ಘಕಾಲದ ತಾತ್ವಿಕ ನಿಲುವನ್ನ ನಾವು ಪುನರುಚ್ಚರಿಸಿದ್ದೇವೆ ಎಂದೂ ಭಾರತದ ಪ್ರಧಾನಿ ಹೇಳಿದ್ದಾರೆ.