ನಾಳೆಯಿಂದ ಹರಿಯಾಣದಲ್ಲಿ ಎಲ್ಲಾ ರಾಜ್ಯಗಳ ಗೃಹ ಸಚಿವರ ಶಿಬಿರ : ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮೋದಿ

Prasthutha|

ಹರಿಯಾಣ: ಇದೇ 27 ಮತ್ತು 28 ರಂದು ಹರಿಯಾಣದ ಸೂರಜ್‌ಕುಂಡ್‌ನಲ್ಲಿ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯಗಳ ಗೃಹ ಸಚಿವರ ಚಿಂತನ್ ಶಿಬಿರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಾಳೆಯಿಂದ ಹರಿಯಾಣದ ಸೂರಜ್ಕುಂಡ್ನಲ್ಲಿ ನಡೆಯಲಿರುವ ಎರಡು ದಿನಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

- Advertisement -

ರಾಜ್ಯಗಳ ಗೃಹ ಸಚಿವರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಆಡಳಿತಗಾರರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಗೃಹ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ ಮಹಾನಿರ್ದೇಶಕರು ಚಿಂತನ್ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಸಮ್ಮೇಳನದ ಆರು ಗೋಷ್ಠಿಗಳಲ್ಲಿ ವಿವಿಧ ವಿಷಯಗಳನ್ನು ಚರ್ಚಿಸಲಾಗುವುದು. ಈ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ “ವಿಷನ್ 2047” ಮತ್ತು ‘ಪಂಚ ಪ್ರಾಣ್’ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.



Join Whatsapp