ವಾರಾಣಸಿ: ನಾಳೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಳೆ ಬೆಳಿಗ್ಗೆ ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ.
ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿರುವ ವಾರಣಾಸಿಯಿಂದ ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ರೋಡ್ ಶೋಗೂ ಮುನ್ನ ಅವರು ಹಿಂದೂ ಮಹಾಸಭಾದ ಸಂಸ್ಥಾಪಕ ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಇದ್ದರು.
ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ.
https://twitter.com/i/broadcasts/1ypKdkBYLONxW