ಹೊಸದಿಲ್ಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನ ಪ್ರಧಾನಿ ಕರೆದ ಈ ಸಭೆಯಲ್ಲಿ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.
ನ.28ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ನಡೆಯಲಿದ್ದು, ಭಾನುವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿಯ ಸಂಸದೀಯ ಸಭೆ ನಡೆಸಲಿದೆ. NDA ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬುಧವಾರ ನಡೆಯಲಿರುವ ಮಹತ್ವದ ಸಂಸತ್ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು. ಅದೇ ಸಮಯದಲ್ಲಿ, ಪ್ರತಿಪಕ್ಷಗಳು ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಒತ್ತಾಯಿಸಲಿವೆ. ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕ್ರಮಕೈಗೊಳ್ಳದ ಹೊರತು ಧರಣಿ ಹಿಂಪಡೆಯುವುದಿಲ್ಲ ಎಂಬುದು ರೈತರ ವಾದ.