ನವೆಂಬರ್ 11ರಂದು ಪ್ರಧಾನಿ ಮೋದಿ ಭೇಟಿ: ಸಿಎಂ ಬೊಮ್ಮಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ

Prasthutha|

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

- Advertisement -

ಪ್ರಧಾನಿ ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸವಿವರ ಮಾಹಿತಿಯನ್ನು ಪಡೆದರು. ತಮ್ಮ ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅಡಚಣೆಯಾಗದಂತೆ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮದಂದು ಚೆನ್ನೆöÊ ಮೈಸೂರು ನಡುವೆ, ದಕ್ಷಿಣ ಭಾರತದ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

- Advertisement -

ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಉದ್ಘಾಟಿಸಲಿದ್ದು, ಇದನ್ನು 5000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವರ್ಷಕ್ಕೆ 2.5 ಕೋಟಿ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯವನ್ನು ಇದು ಹೊಂದಿದೆ.  ಉದ್ಯಾನವನದ ವಿನ್ಯಾಸ. ಸುಸ್ಥಿರತೆ, ರಾಮಾಯಣ, ಮಹಾಭಾರತದ ಕಾಲದ ಸಸ್ಯಗಳನ್ನು ಗುರುತಿಸಿ, ನೆಡಲಾಗಿದೆ. ನೀರಿನ ಮರುಬಳಕೆ, ವಿದ್ಯುತ್ ಬಳಕೆಯಲ್ಲಿ ಸುಸ್ಥಿರತೆಯನ್ನು ಹೊಂದಿರುವ ಟರ್ಮಿನಲ್ ಇದಾಗಿದೆ ಎಂದರು.

ವಿಮಾನ ನಿಲ್ದಾಣದ ಆವರಣದಲ್ಲಿರುವ 108 ಅಡಿ ಎತ್ತರದ  ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದು, ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯ ಅಧಿಕಾರಿಗಳು, ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಹಿರಿಯ  ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Join Whatsapp