ಇಂದು ಪ್ರಧಾನಿ ಮೋದಿ ಭೇಟಿ| ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗ ಹೀಗಿದೆ

Prasthutha|

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಇಂದು(ಮೇ.3)ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಗೆ ಮೋದಿ ಆಗಮಿಸಲಿದ್ದಾರೆ. ಈ ಹಿನ್ನಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗ ಹೀಗಿದೆ.

- Advertisement -

ಪ್ರಧಾನಿ ಮೋದಿ ಪ್ರಚಾರ ಹಿನ್ನೆಲೆ ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು, ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು, ಮುಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರು ಕಡೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಇನ್ನು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್ನಲ್ಲಿ ಬಲಕ್ಕೆ ಚಲಿಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ, ಮುಲ್ಕಿ ಕಡೆಗೆ ಅಥವಾ ಕೂಳೂರು ಜಂಕ್ಷನ್ನಿಂದ ಬಲಕ್ಕೆ ಚಲಸಿ ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಬಹುದು. ಜೊತೆಗೆ ಮಂಗಳೂರು, ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ, ಎಸ್-ಕೋಡಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.