ನಾಳೆ ಮಂಗಳೂರಿಗೆ ಬರುತ್ತಿದ್ದೇನೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ

Prasthutha|

ಮಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ಈ ಬಗ್ಗೆ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

- Advertisement -


ಕೇರಳ ಹಾಗೂ ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.




Join Whatsapp