ಬೆಂಗಳೂರು: ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ನೀಡದಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡ್ರಾವ್ ಕಿಡಿಕಾರಿದ್ದು. ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ ಬಿಜೆಪಿ ನಾಯಕರಿಗೂ ಅವಕಾಶ ಕೊಟ್ಟಿಲ್ಲ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯವರನ್ನು ಕೂಡ ಹತ್ತಿರಕ್ಕೆ ಬಿಟ್ಟು ಕೊಳ್ಳಲಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಇದಕ್ಕಿಂತ ಅಪಮಾನವುಂಟೇ? ಬಿಜೆಪಿ ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ. ರಾಜ್ಯ ಬಿಜೆಪಿ ನಾಯಕರು ಇಂದು ಮೋದಿಯವರ ಮುಂದೆ ಮುಂದೆ ಹಲ್ಲುಗಿಂಜಿ ಜೀ ಹುಜೂರು ಎಂದು ಮಂಡಿಯೂರಿ ನಿಂತರೂ, ಮೋದಿಯವರು ಕಣ್ಣೆತ್ತಿಯೂ ನೋಡಿಲ್ಲ.
ಮೋದಿಯವರ ಸರ್ವಾಧಿಕಾರಿ ಮನಃಸ್ಥಿತಿಯ ಬಗ್ಗೆ ಸತ್ಯ ಹೇಳಿದಾಗಲೆಲ್ಲಾ ರಾಜ್ಯ ಬಿಜೆಪಿಯ ಎಗರೆಗರಿ ಬೀಳುತ್ತಿದ್ದರು. ಬಹುಷಃ ರಾಜ್ಯ ಬಿಜೆಪಿ ನಾಯಕರಿಗೆ ಇಂದು ಮೋದಿಯವರ ಸರ್ವಾಧಿಕಾರಿ ಮನೋಭಾವದ ಸತ್ಯದರ್ಶನವಾಗಿರಬಹುದು. ಬಿಜೆಪಿ ನಾಯಕರೇ, ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ? ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ವ್ಯಂಗ್ಯ ಮಾಡಿದ್ದಾರೆ.
2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2023
ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ.@BJP4Karnataka ನಾಯಕರು ಇಂದು ಮೋದಿಯವರ ಮುಂದೆ ಹಲ್ಲುಗಿಂಜಿ ಜೀ ಹುಜೂರು ಎಂದು ಮಂಡಿಯೂರಿ ನಿಂತರೂ, ಮೋದಿಯವರು ಕಣ್ಣೆತ್ತಿಯೂ ನೋಡಿಲ್ಲ.