Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ತಾಯಿ ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿ ತಾಯಿ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಸ್ಥಳೀಯ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಹಮದಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.


ಇದೇ ವೇಳೆ ಹೀರಾಬೆನ್ ಆರೋಗ್ಯದ ಬಗ್ಗೆ ಆಸ್ಪತ್ರೆಯವರು ಮಾಧ್ಯಮ ಪ್ರಕಟಣೆ ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಸಿಎಂ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ. ಕೈಲಾಸನಾಥನ್ ಆಸ್ಪತ್ರೆಗೆ ಆಗಮಿಸಿದ್ದಾರೆ.

Join Whatsapp
Exit mobile version