Home ಟಾಪ್ ಸುದ್ದಿಗಳು ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಚಿತ್ರ ಮಾಯ

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಚಿತ್ರ ಮಾಯ

ಬೆಂಗಳೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿತರಿಸುವ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ಮೋದಿ ಚಿತ್ರವನ್ನು ತೆಗೆದುಹಾಕಲಾಗಿದೆ.


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಥರಹೇವಾರಿ ಚರ್ಚೆಗಳು ನಡೆಯುತ್ತಿವೆ. ಕೋವಿಶೀಲ್ಡ್ ಲಸಿಕೆಯಲ್ಲಿ ಅಡ್ಡಪರಿಣಾಮ ಇದೆ ಎಂದು ಅದರ ತಯಾರಕ ಕಂಪನಿ ಆಸ್ಟ್ರೆಜೆನೆಕಾ ಹೇಳಿಕೆ ನೀಡಿದ ಬಳಿಕ ಮೋದಿಯವರ ಚಿತ್ರ ತೆಗೆದುಹಾಕಲಾಗಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಸಂದೀಪ್ ಮನುಧಾನೆ ಎನ್ನುವವರು ಲಸಿಕೆಯ ಪ್ರಮಾಣ ಪತ್ರವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿಜಿ ಕಾಣಿಸುತ್ತಿಲ್ಲ. ಪರಿಶೀಲನೆ ಮಾಡಲು ಡೌನ್ಲೋಡ್ ಮಾಡಿದೆ. ಹೌದು ಅವರ ಚಿತ್ರ ಹೋಗಿದೆ’ ಎಂದು ಬರೆದುಕೊಂಡಿದ್ದಾರೆ.


ಮಾದರಿ ನೀತಿ ಸಂಹಿತೆ ಮತ್ತು ಇಸಿಐ ಮಾರ್ಗಸೂಚಿಗಳು. ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳಲ್ಲಿ ಫೋಟೋವನ್ನು ತೆಗೆದುಹಾಕಲಾಗಿದೆಎಂದು ನೆಟ್ಟಿಗರು ಹೇಳಿದ್ದಾರೆ.

https://twitter.com/sandeep_PT/status/1785614681463288023
Join Whatsapp
Exit mobile version