ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪ್ರಿಯತೆ ಕುಗ್ಗಿದ್ದು. ಮುಂದಿನ ಪ್ರಧಾನಿ ಕುರಿತು ಇಂಡಿಯಾ ಟುಡೆ ನಡೆಸಿದ್ದ ಸಮೀಕ್ಷೆಯಲ್ಲಿ ಶೇ 24 ರಷ್ಟು ಜನರಷ್ಟೇ ಮೋದಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ.
ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು. ಆದರೆ, ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಅವರ ಜನಪ್ರಿಯತೆಯ ಅಂಕಿ ಅಂಶವು ಇಳಿದಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.