ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಪ್ಲ್ಯಾನ್ ಆಗಿಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

Prasthutha|

ಬೆಂಗಳೂರು: ಚಂದ್ರಯಾನ-3 ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ಮೋದಿಯವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ರೋಡ್ ಶೋ ಆಯೋಜನೆ ಆಗಿಲ್ಲ ಎಂದು ಕೇಂದ್ರ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ಸ್ಪಷ್ಟಪಡಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ ಎಚ್ ಎಎಲ್ ಏರ್ ಪೋರ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತ ಕೋರಲಾಗುವುದು. ಬಳಿಕ ಇಸ್ರೋ ಸೆಂಟರ್ ಗೆ ಪ್ರಧಾನಿಯವರು ತೆರಳಲಿದ್ದಾರೆ. ಅಲ್ಲಿ ಇಸ್ರೋ ವಿಜ್ಞಾನಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಉಳಿದಂತೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ ಎಂದು ಮಾಹಿತಿ ನೀಡಿದರು.



Join Whatsapp