Home ಟಾಪ್ ಸುದ್ದಿಗಳು ನಾಳೆ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಸಮಯ ಬದಲಾವಣೆ

ನಾಳೆ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಸಮಯ ಬದಲಾವಣೆ

ಮಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ಸುನೀಲ್ ಕುಮಾರ್, ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಕಾರ್ಯಕ್ರಮ ಆರಂಭವಾಗಲಿದೆ. ಈ ಹಿಂದೆ ಸಂಜೆ 7 ಗಂಟೆಗೆ ರೋಡ್ ಶೋ ಸಮಯ ನಿಗದಿಯಾಗಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪ್ರಧಾನಿ ಮೋದಿ 7:45ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾರಾಯಣ ಗುರು ಸರ್ಕಲ್ ಬಳಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ ಎಂದು ತಿಳಿಸಿದರು.

Join Whatsapp
Exit mobile version