ಮಂಗಳೂರು: ಶುಕ್ರವಾರ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
ಮೈದಾನದಲ್ಲಿ ಸಿಸಿ ಕ್ಯಾಮೆರಾ ಇಲ್ಲದ್ದಕ್ಕೆ ಅಲೋಕ್ ಕುಮಾರ್ ಗರಂ ಆಗಿದ್ದು, ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪನಿಗಳು ಹಾಗೂ ಕಾರ್ಯಕ್ರಮ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡು ಸಿಸಿ ಕ್ಯಾಮೆರಾ ಹಾಕಿದ್ದೀರಿ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಆದೇಶ ನೀಡಿದ್ದಾರೆ.