Home ಟಾಪ್ ಸುದ್ದಿಗಳು ಇಂದು ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಇಂದು ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಹೊಸದಿಲ್ಲಿ : ದೇಶಾದ್ಯಂತ ಕೋವಿಡ್ ಸೋಂಕಿನ ಗಣನೀಯ ಇಳಿಕೆಯ ಹೊತ್ತಿನಲ್ಲಿಯೇ, ಪ್ರಧಾನಿ ನರೇಂದ್ರ ಮೋದಿಯವರು, ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಸುದ್ದಿಗೋಷ್ಠಿ ತೀವ್ರ ಕುತೂಹಲ ಕೆರಳಿಸಿದ್ದು, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದು, ತುರ್ತು ಸುದ್ದಿಗೋಷ್ಠಿ ಈಗ ತೀವ್ರ ಕುತೂಹಲ ಕೆರಳಿಸಿದೆ. ಇಂದಿನ ದೇಶವನ್ನುದ್ದೇಶಿಸಿ ಪ್ರಧಾನಿಯವರು ಮಾತನಾಡುತ್ತಿರುವಂತ ಭಾಷಣದಲ್ಲಿ, ದೇಶದ ಪ್ರಸ್ತುತ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತಂತೆ, ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗಿದ್ದು. ಆ ಬಗ್ಗೆ ಕಾದು ನೋಡಬೇಕಿದೆ.

Join Whatsapp
Exit mobile version