Home ಟಾಪ್ ಸುದ್ದಿಗಳು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿಎಂ ಬೊಮ್ಮಾಯಿ ಸ್ವಾಗತ

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿಎಂ ಬೊಮ್ಮಾಯಿ ಸ್ವಾಗತ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.


ಪ್ರಧಾನಿ ಮೋದಿ ಅವರನ್ನು ಯಲಹಂಕ ವಾಯುನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.


ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮುಖ್ಯ ಕಾರ್ಯಕ್ರಮವಾಗಿದೆ. ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು, ನಾಳೆ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ತಿರುವನಂತಪುರಕ್ಕೆ ತೆರಳಲಿದ್ದಾರೆ.

Join Whatsapp
Exit mobile version