ಗಾಝಾ ಆಸ್ಪತ್ರೆಯ ದಾಳಿಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ

Prasthutha|

ನವದೆಹಲಿ: ಗಾಝಾ ಆಸ್ಪತ್ರೆಯಲ್ಲಿ ಸಂಭವಿಸಿದ ಸ್ಫೋಟದಿಂದ ತೀವ್ರ ಆಘಾತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

- Advertisement -


ಗಾಝಾ ನಗರದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.


ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಯಿಂದ ತೀವ್ರ ಆಘಾತವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಎಕ್ಸ್ ನಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Join Whatsapp