ಬೆಂಗಳೂರಿನಲ್ಲಿ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ

Prasthutha|

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

- Advertisement -

ಚಂದ್ರಯಾನ-3 ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

HAL ಏರ್​​ಪೋರ್ಟ್​ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.‌ದಯಾನಂದ್​​​​, ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್​, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್​ರಿಂದ ಸ್ವಾಗತಿಸಿದರು.

- Advertisement -

ಜಾಲಹಳ್ಳಿ ಕ್ರಾಸ್​​​ ಬಳಿ ಸಾವಿರಾರು ಕಾರ್ಯಕರ್ತರು ಮೋದಿಗಾಗಿ ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು. 

ಹೆಚ್​ಎಎಲ್​ ಏರ್​ಪೋರ್ಟ್​ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್​, ಜೈ ವಿಜ್ಞಾನ​ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು. ನಂತರ ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಭೇಟಿಕೊಟ್ಟ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು.

ಚಂದ್ರಯಾನ-3 ಯೋಜನೆ, ಪ್ರಜ್ಞಾನ್​ ರೋವರ್​​ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಲಿದ್ದಾರೆ.

Join Whatsapp