ಹಣದುಬ್ಬರ, ನಿರುದ್ಯೋಗ ಕುರಿತ ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲಿ: ರಾಹುಲ್ ಗಾಂಧಿ

Prasthutha|

ನವದೆಹಲಿ: ಹಣದುಬ್ಬರ ಮತ್ತು ನಿರುದ್ಯೋಗವು ಏಕೆ ಉತ್ತುಂಗದಲ್ಲಿದೆ  ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲೇಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ , ಹಣದುಬ್ಬರವು 35 ವರ್ಷಗಳ ಗರಿಷ್ಠ ಮಟ್ಟಕ್ಕೆ ಏಕೆ ಇದೆ? ನಿರುದ್ಯೋಗವು 45 ವರ್ಷಗಳ ಗರಿಷ್ಠ ಮಟ್ಟದಲ್ಲಿ ಏಕೆ ಇದೆ? ಪರೋಟ ಮೇಲೆ ಶೇ.18ರಷ್ಟು ಜಿಎಸ್ಟಿ ವಿಧಿಸಲು ಕಾರಣವೇನು? ಕೃಷಿ ಟ್ರ್ಯಾಕ್ಟರ್ ಗಳಿಗೆ 12% ಜಿಎಸ್ಟಿ ತೆರಿಗೆ ವಿಧಿಸಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯು ನಿಮಗೆ ಇಂತಹ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತದೆ, ಪ್ರಧಾನ ಮಂತ್ರಿಯವರೇ, ನೀವು ಉತ್ತರಿಸಬೇಕಾಗುತ್ತದೆ  ಎಂದರು.

- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ಸಮಸ್ಯೆಗಳನ್ನು ಎತ್ತಿ ತೋರಿಸಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೊರಟಿರುವ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಕಾಂಗ್ರೆಸ್ ನಾಯಕ ಪ್ರಸ್ತುತ ಕರ್ನಾಟಕದಲ್ಲಿದ್ದಾರೆ.



Join Whatsapp