ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

Prasthutha|

ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಅವರ ಪರ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -


ಇಂದು ಶಿವಮೊಗ್ಗದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮೋದಿಯನ್ನು ಗುರಿಯಾಗಿಸಿಕೊಂಡು “ಮಾಸ್ ರೇಪಿಸ್ಟ್” ಪರವಾಗಿ ಮತಯಾಚಿಸಿದ್ದಕ್ಕಾಗಿ ಅವರು ದೇಶದ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp