Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಅವರ ಪರ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.


ಇಂದು ಶಿವಮೊಗ್ಗದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮೋದಿಯನ್ನು ಗುರಿಯಾಗಿಸಿಕೊಂಡು “ಮಾಸ್ ರೇಪಿಸ್ಟ್” ಪರವಾಗಿ ಮತಯಾಚಿಸಿದ್ದಕ್ಕಾಗಿ ಅವರು ದೇಶದ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version