Home ಟಾಪ್ ಸುದ್ದಿಗಳು ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲು ಎಎಪಿ ನಿರ್ಧಾರ

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲು ಎಎಪಿ ನಿರ್ಧಾರ

ನವದೆಹಲಿ: ಈ ಬಾರಿ ಎಎಪಿ ಪಕ್ಷವು ಹೋಳಿ ಹಬ್ಬ ಆಚರಿಸುವುದಿಲ್ಲ. ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಮಾರ್ಚ್ 26ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಘೇರಾವ್ ಹಾಕುತ್ತೇವೆ ಎಂದು ದೆಹಲಿ ಸಚಿವವರೂ ಆಗಿರುವ ಪಕ್ಷದ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ.


ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಕುಟುಂಬದ ಭೇಟಿಗೆ ಬಂದ ಎಎಪಿಯ ಶಾಸಕರು, ಕೌನ್ಸಿಲರ್ ಗಳನ್ನು ಪೊಲೀಸರು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.


‘ಇಡೀ ದಿನ ಕಾರ್ಯಕರ್ತರು ಹಾಗೂ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಇಡೀ ದೇಶ ಕೇಜ್ರಿವಾಲ್ ಅವರ ಬಂಧನಕ್ಕೆ ಆಕ್ರೋಶ ಹಾಗೂ ದುಃಖ ವ್ಯಕ್ತಪಡಿಸಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಎಎಪಿಯ ಎಲ್ಲಾ ಶಾಸಕರು, ಕೌನ್ಸಿಲರ್ ಗಳು, ಸಿಬ್ಬಂದಿಗಳು, ಇಂಡಿಯಾ ಮೈತ್ರಿಕೂಟದ ಪ್ರತಿನಿಧಿಗಳು ಪ್ರಜಾಪ್ರಭುತ್ವ ಉಳಿಸುವ ಪ್ರತಿಜ್ಞೆ ಮಾಡಲಿದ್ದೇವೆ. ಭಗತ್‌ ಸಿಂಗ್‌, ರಾಜಗುರು, ಸುಖದೇವ್ ಅವರ ಹುತಾತ್ಮ ದಿನವಾದ ಶನಿವಾರದಂದು ಶಹೀದಿ ಪಾರ್ಕ್ನಲ್ಲಿ ನಾವು ಸಮಾವೇಶಗೊಳ್ಳಲಿದ್ದೇವೆ. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ರೈ ಹೇಳಿದ್ದಾರೆ.

Join Whatsapp
Exit mobile version