ಬೀಜಿಂಗ್: ಕೋವಿಡ್-19 ಬಳಿಕ ಚೀನಾ ಈಗ ಹೊಸ ಸಾಂಕ್ರಾಮಿಕ ರೋಗದ ಭೀತಿಯಲ್ಲಿದೆ. ಚೀನಾದಲ್ಲಿ ಹಲವಾರು ಮಂದಿಗೆ, ಹೆಚ್ಚಾಗಿ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಮಾದರಿಯ ಸಮಸ್ಯೆ ಉಂಟಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಬೀಜಿಂಗ್ ಸೇರಿದಂತೆ ದೇಶದಾದ್ಯಂತದ ನಗರಗಳಲ್ಲಿ ನ್ಯುಮೋನಿಯಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದೆ. ಚೀನಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವುತ್ತಿರುವುದಾಗಿ ವರದಿಯಾಗಿದೆ.
ಶಾಲಾ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಸೋಂಕಿನ ಹೆಚ್ಚಳ, ಹೀಗಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಮತ್ತು ನ್ಯುಮೋನಿಯಾ ಪ್ರಕರಣಗಳ ಹೆಚ್ಚಳದ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಚೀನಾದಿಂದ ವಿವರವಾದ ವರದಿಯನ್ನು ಕೋರಿದೆ.