ಮಂಗಳೂರು ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೈದ ಪೋಕ್ಸೋ ಆರೋಪಿ !

Prasthutha|

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಯೋರ್ವ ಮಂಗಳೂರು ಜಿಲ್ಲೆ ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ರವಿರಾಜ್ (31) ಮೃತಪಟ್ಟ ಆರೋಪಿ. ಕಿನ್ಯ ನಿವಾಸಿಯಾಗಿರುವ ರವಿರಾಜ್ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ನಿನ್ನೆಯಷ್ಟೇ ಬಂಧಿತನಾಗಿದ್ದ. ಪೊಲೀಸರು ಆತನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಾಗ ಪೊಲೀಸರಿಂದ ತಪ್ಪಿಸಿಕೊಂಡು ಆತ್ಮಹತ್ಯೆ ಮಾಡಿದ್ದಾನೆ. 6ನೇ ಮಹಡಿಯಿಂದ ಹಾರಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೈಟಿಂಗ್ ಕೆಲಸ ಮಾಡುತ್ತಿದ್ದ ರವಿರಾಜ್ ತೊಕ್ಕೊಟ್ಟು ಸೆಬಾಸ್ಟಿಯನ್ ಕಾಲೇಜು ಬಳಿ ಯುವತಿಯೊಬ್ಬಳನ್ನು ತಡೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು.

- Advertisement -