ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಶೇಷ ಅಭಿಯೋಜಕರನ್ನು ನೇಮಿಸಿದ ಸರಕಾರ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

- Advertisement -

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ.

ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ವಿವರಿಸಿದ್ದರು.

- Advertisement -

ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆಯ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.

Join Whatsapp