Home ಟಾಪ್ ಸುದ್ದಿಗಳು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ತನಿಖೆ ಹೊಣೆ CIDಗೆ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ತನಿಖೆ ಹೊಣೆ CIDಗೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ ಐಆರ್ ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.


ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು.

Join Whatsapp
Exit mobile version