ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Prasthutha|

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -


ಈ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.


ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ ಎಂದರು.



Join Whatsapp