ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎ ಸ್ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 26) ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.