ಪೋಕ್ಸೋ ಕೇಸ್: ಮುರುಘಾ ಶ್ರೀಗೆ ಜಾಮೀನು ಮಂಜೂರು

Prasthutha|

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -


2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.


ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.

- Advertisement -


ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.



Join Whatsapp