ಪೋಕ್ಸೋ ಕೇಸ್: ಜಾನಿ ಮಾಸ್ಟರ್​ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು..!

Prasthutha|

ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜಾನಿ ಮಾಸ್ಟರ್​ಗೆ ಮತ್ತೊಂದು ದೊಡ್ಡ ಶಾಕ್ ಸಿಕ್ಕಿದೆ.

- Advertisement -

ಜಾನಿ ಮಾಸ್ಟರ್​ಗೆ ನೀಡಲಾಗಿದ್ದ ರಾಷ್ಟ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.

ಅವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದರಿಂದ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

- Advertisement -

ತಮಿಳಿನ ‘ತಿರುಚಿತ್ರಂಬಲಂ’ ಚಿತ್ರಕ್ಕಾಗಿ ಜಾನಿ ಮಾಸ್ಟರ್ ಅತ್ಯುತ್ತಮ ನೃತ್ಯ ಸಂಯೋಜಕ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಅಕ್ಟೋಬರ್ 8ರಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಪ್ರಶಸ್ತಿ ಸ್ವೀಕರಿಸಲು ಜಾನಿ ಮಾಸ್ಟರ್‌ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಪ್ರಶಸ್ತಿ ರದ್ದತಿಯಿಂದಾಗಿ ಜಾನಿ ಮಾಸ್ಟರ್ ಮಧ್ಯಂತರ ಜಾಮೀನು ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಾನಿ ಮಾಸ್ಟರ್ ‘ಅತ್ಯುತ್ತಮ ನೃತ್ಯ ಸಂಯೋಜಕ’ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಕೆಲವು ದಿನಗಳ ನಂತರ, ಅತ್ಯಾಚಾರದ ಆರೋಪದ ಮೇಲೆ ಅವರನ್ನು ಬಂಧಿಸಲಾಯಿತು. ತಮಗೆ ಲೈಂಗಿಕ ಕಿರುಕುಳ ಆಗಿದೆ ಎಂದು ಅವರ ಸಹೋದ್ಯೋಗಿಯೇ ಆರೋಪಿಸಿದ್ದರು. ಹೈದರಾಬಾದ್ ಮತ್ತು ಮುಂಬೈನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.



Join Whatsapp