ಬೆಳ್ತಂಗಡಿ | ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Prasthutha|

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ. ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.


ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ರಾಜೇಶ್.ಎಮ್.ಕೆ ವಿರುದ್ಧ ಜೂ.5ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.



Join Whatsapp