ಉಪ್ಪಿನಂಗಡಿ | ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ: ಪೋಕ್ಸೊ ಪ್ರಕರಣ ದಾಖಲು

Prasthutha|

ಉಪ್ಪಿನಂಗಡಿ: ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -


ವಿದ್ಯಾರ್ಥಿನಿಯನ್ನು ಆರೋಪಿಯು ಫೋನ್ ಮೂಲಕ ಸಂಪರ್ಕ ಬೆಳೆಸಿ, ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



Join Whatsapp