ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.
ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್ ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.