Home ಟಾಪ್ ಸುದ್ದಿಗಳು ಪೋಕ್ಸೋ ಕೇಸ್: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಪೋಕ್ಸೋ ಕೇಸ್: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.

ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

Join Whatsapp
Exit mobile version